February 6, 2026
Friday, February 6, 2026
spot_img

ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸ ತುಂಬಿದ್ದ ಕವರ್ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಳ್ಳಾರಿಯನಾಗಲಕೇರಿ ಪ್ರದೇಶದ ಪ್ರಸಿದ್ಧ ಬಾಲಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸದ ಚೀಲ ಪತ್ತೆಯಾಗಿದ್ದು, ಭಕ್ತರಿಗೆ ಆಘಾತ ಉಂಟುಮಾಡಿದೆ.

ಪ್ಲಾಸ್ಟಿಕ್ ಕವರ್‌ನಲ್ಲಿ ತಂದಿದ್ದ ಮಾಂಸವನ್ನು ಆಂಜನೇಯ ದೇವಸ್ಥಾನದ ಹಿಂಭಾಗದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದ ಗರುಡಗಂಬದ ಬಳಿ ಎಸೆಯಲಾಗಿದೆ. ಇದನ್ನು ಕಂಡು ಭಕ್ತರು ಅಹಸ್ಯ ಪಟ್ಟುಕೊಂಡಿದ್ದಾರೆ. ಈ ರೀತಿ ಮಾಡಿದ ಕಿಡಿಗೇಡಿಗಳಿಗೆ ಶಿಕ್ಷೆ ನೀಡಿ ಎಂದು ಮನವಿ ಮಾಡಿದ್ದಾರೆ.

ಶುಕ್ರವಾರ ಬೆಳಿಗ್ಗೆ 5:30 ರ ಸುಮಾರಿಗೆ ದೇವಸ್ಥಾನಕ್ಕೆ ಆಗಮಿಸಿದ ಅರ್ಚಕರು , ಪ್ಲಾಸ್ಟಿಕ್ ಕವರ್‌ನಲ್ಲಿ ಮಾಂಸದ ತುಂಡುಗಳನ್ನು ನೋಡಿ ದಿಗ್ಭ್ರಮೆಗೊಂಡಿದ್ದಾರೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ, ನೂರಾರು ಭಕ್ತರು ದೇವಸ್ಥಾನದ ಬಳಿ ಜಮಾಯಿಸಿದ್ದಾರೆ.

ಪೊಲೀಸರಿಗೆ ಈಗಾಗಲೇ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !