ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ನಂತರ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಿನ್ನೆ ವಿಧಾನ ಪರಿಷತ್ತಿನಲ್ಲಿ ಚರ್ಚೆ ನಡೆದಿದ್ದು, ಈ ಬಾರಿ ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.
ಪಾಕಿಸ್ತಾನ ನಮ್ಮ ಶತ್ರುವಲ್ಲ, ನಮ್ಮ ನೆರೆಯ ದೇಶ ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಯಿಂದ ವಿರೋಧ ಪಕ್ಷಗಳು ಅಸಮಾಧಾನಗೊಂಡಿವೆ. ಆದರೆ ಬಿ.ಕೆ ಹರಿಪ್ರಸಾದ್ ಮಾಧ್ಯಮಗಳಿಗೆ ಹಕ್ಕುಚ್ಯುತಿ ಪತ್ರ ನೀಡುವುದಾಗಿ ತಿಳಿಸಿದ್ದಾರೆ.
ನಿನ್ನೆ ವಿಧಾನ ಪರಿಷತ್ ನಲ್ಲಿ ನಡೆದಿದ್ದನ್ನು ಕೆಲ ಮಾಧ್ಯಮಗಳು ಅಪಪ್ರಚಾರ ಮಾಡುತ್ತಿವೆ. ಇದು ಪರಿಷತ್ತಿನ ಅನರ್ಹತೆಯನ್ನು ಅರ್ಥೈಸುತ್ತದೆ. ಹಾಗಾಗಿ ನಾನು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ಇಂದು ನಾನು ಕೆಲ ಮಾಧ್ಯಮಗಳ ಮೇಲೆ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಇದನ್ನು ಬಿಜೆಪಿ ತನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ಬಿಜೆಪಿ ಕೊಳಕು ತಂತ್ರಗಳನ್ನು ಕೊನೆಗೊಳಿಸಬೇಕು. ನಿನ್ನೆ ನನ್ನ ಉತ್ತರದಲ್ಲಿ ಬಿಜೆಪಿಗೆ ಶತ್ರು ರಾಷ್ಟ್ರ ಆಗಿರಬಹುದು ಆದರೆ ನೆರೆ ರಾಷ್ಟ್ರ ಅಂತ ನಾನು ಹೇಳಿದ್ದೆ. ಇದನ್ನು ಮಾಧ್ಯಮಗಳಲ್ಲಿ ವಿಭಿನ್ನ ರೀತಿಯಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಈ ಬಗ್ಗೆ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಹರಿಪ್ರಸಾದ್ ಹೇಳಿದ್ದಾರೆ.