September 27, 2026
Sunday, September 27, 2026
spot_img

‘ಮಾಧ್ಯಮವೇ ನ್ಯಾಯಾಲಯ ಅಲ್ಲ’: ದರ್ಶನ್ ಪ್ರಕರಣದಲ್ಲಿ ಹೈಕೋರ್ಟ್ ಕಠಿಣ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿ ನಟ ದರ್ಶನ್ ವಿರುದ್ಧ ನಡೆಯುತ್ತಿರುವ ‘ಮಾಧ್ಯಮ ವಿಚಾರಣೆ’ ಕುರಿತು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ನ್ಯಾಯಾಲಯದ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೆಲವು ಮಾಧ್ಯಮಗಳು ತೀರ್ಪು ನೀಡುವ ರೀತಿಯಲ್ಲಿ ವರ್ತಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರಕರಣದ ವಿಚಾರಣೆ ವೇಳೆ, ಮಾಧ್ಯಮಗಳು ನ್ಯಾಯಾಧೀಶರ ಸ್ಥಾನವಹಿಸಲು ಸಾಧ್ಯವಿಲ್ಲ. ಆರೋಪಿಯ ವಿರುದ್ಧ ಪೂರ್ವಾಗ್ರಹ ಮೂಡಿಸುವ ರೀತಿಯ ಪ್ರಸಾರಗಳು ನ್ಯಾಯಯುತ ವಿಚಾರಣೆಗೆ ಧಕ್ಕೆ ತರುತ್ತವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೆಲ ವಾಹಿನಿಗಳು ನ್ಯಾಯಾಲಯದ ಕಲಾಪಗಳನ್ನು ಪುನರ್ ನಿರ್ಮಿಸಿದಂತೆ ದೃಶ್ಯಗಳನ್ನು ಪ್ರಸಾರ ಮಾಡುತ್ತಿರುವುದನ್ನೂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

ಇದನ್ನೂ ಓದಿ:

ದರ್ಶನ್ ಸಲ್ಲಿಸಿದ್ದ ಅರ್ಜಿಯಲ್ಲಿ, ಕೆಲವು ಟಿವಿ ಚಾನೆಲ್‌ಗಳು ಮತ್ತು ಡಿಜಿಟಲ್ ವೇದಿಕೆಗಳು ಊಹಾತ್ಮಕ ವರದಿ, ಪರಿಶೀಲಿಸದ ಆರೋಪಗಳು ಹಾಗೂ ಸೋರಿಕೆಯಾದ ಮಾಹಿತಿಗಳನ್ನು ಆಧರಿಸಿ ಜನಾಭಿಪ್ರಾಯ ರೂಪಿಸುತ್ತಿವೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯಕ್ಕೆ ಕ್ರಮ ಕೈಗೊಳ್ಳುವಂತೆ ಕೋರ್ಟ್ ಸೂಚಿಸಿದೆ.

ಇಂತಹ ಪ್ರಸಾರಗಳು ನ್ಯಾಯಾಂಗ ಪ್ರಕ್ರಿಯೆಗೆ ಅಡ್ಡಿಯಾಗುವ ಜೊತೆಗೆ ನ್ಯಾಯಾಲಯದ ಆದೇಶಗಳ ಉಲ್ಲಂಘನೆಯಾಗಬಹುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.

Must Read