ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈದ್ಯಕೀಯ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ 21 ವರ್ಷದ ಯುವತಿ ಕಟ್ಟಡದ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಅಲ್ಲಿನ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ವೃದ್ಧ ದಂಪತಿಯನ್ನು ನೋಡಿಕೊಳ್ಳಲು ಆಕೆಯನ್ನು ನೇಮಿಸಲಾಗಿತ್ತು, ಆ ದಂಪತಿಯ ಮಗ ವಿದೇಶದಲ್ಲಿ ವಾಸವಾಗಿದ್ದ. ಇಲ್ಲಿ ಯಾರೂ ನೋಡಿಕೊಳ್ಳಲು ಇಲ್ಲ ಎಂದು ಆಕೆಯನ್ನು ನೇಮಿಸಲಾಗಿತ್ತು. ಯಾವ ಕಾರಣಕ್ಕಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿಲ್ಲ.
ಮೃತಳ ಕುಟುಂಬ ಸದಸ್ಯರು ಯಾವುದೇ ದೂರು ದಾಖಲಿಸಿಲ್ಲ. ಅವರ ದೇಹವನ್ನು ಅವರಿಗೆ ಹಸ್ತಾಂತರಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.