Monday, November 28, 2022

Latest Posts

ವಿದ್ಯಾರ್ಥಿಗಳಿಂದ ಮೆಡಿಕಲ್ ಕಾಲೇಜುಗಳು ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ: ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮೆಡಿಕಲ್ ಕಾಲೇಜುಗಳು ನಿಗದಿಪಡಿಸಿದ ಶುಲ್ಕಕ್ಕಿಂತ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕವನ್ನು ಪಡೆಯುವಂತಿಲ್ಲವೆಂದು ಸರ್ಕಾರ ಎಚ್ಚರಿಸಬೇಕೆಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾ ಅವರಿದ್ದ ಹೈಕೋರ್ಟ್ ಪೀಠ,ಸರ್ಕಾರ, ಕೆಇಎ ನಿಗದಿಪಡಿಸಿರುವ ಪ್ರವೇಶ ಶುಲ್ಕವನ್ನು ಮಾತ್ರ ವೈದ್ಯಕೀಯ ಕಾಲೇಜುಗಳು ಪಡೆಯಬೇಕು. ಹೆಚ್ಚಿನ ಶುಲ್ಕ ಪಡೆದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು, ವಿದ್ಯಾರ್ಥಿಗಳಿಗೆ ಶುಲ್ಕವನ್ನು ಮರಳಿಸಬೇಕು. ವೈದ್ಯಕೀಯ ಕಾಲೇಜುಗಳಿಗೆ ಶಿಕ್ಷಣ ನೀಡುವ ಉದ್ದೇಶವಿರಬೇಕು. ಕಾಲೇಜುಗಳು ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ವಸೂಲು ಮಾಡಬಾರದು ಎಂದು ನಿರ್ದೇಶನ ನೀಡಿದೆ.

2017-18ರ ಶೈಕ್ಷಣಿಕ ವರ್ಷದಲ್ಲಿ 21 ವಿದ್ಯಾರ್ಥಿಗಳು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಕೋರ್ಸ್‌ಗೆ ಸೇರಿದ್ದರು. ಆಗ ಕಾಲೇಜಿನ ಆಡಳಿತ ಮಂಡಳಿ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚುವರಿ ಶುಲ್ಕವನ್ನು ಪಡೆದುಕೊಂಡಿತ್ತು. ಈ ಮೊತ್ತವನ್ನು ಹಿಂದಿರುಗಿಸಬೇಕು ಎಂದು ಕೋರಿ ಎಲ್ಲ ವಿದ್ಯಾರ್ಥಿಗಳು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!