ಹೊಸದಿಗಂತ ಆನ್ ಲೈನ್ ಡೆಸ್ಕ್:
ಬಾಲಿವುಡ್ ನ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವುದಾಗಿ ತಮ್ಮ ಬ್ಲಾಗ್ ನಲ್ಲಿ ತಿಳಿಸಿದ್ದಾರೆ.
78 ವಯಸ್ಸಿನ ಬಿಗ್ ಬಿ ತಮ್ಮ ಬ್ಲಾಗ್ ನಲ್ಲಿ ಅಭಿಮಾನಿಗಳಿಗೆ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಬ್ಲಾಗ್ ನಲ್ಲಿ ಬರೆದುಕೊಂಡಿರುವ ಅವರು, ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದೇನೆ.. ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.
ವಿಕಾಸ್ ಬಹ್ಲ್ ಅವರ ಮುಂಬರುವ ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದ್ದರು. ಈ ಹಿಂದೆ ಅಮಿತಾಬ್ ಬಚ್ಚನ್ ಹಾಗೂ ಅವರ ಕುಟುಂಬದವರೆಲ್ಲರಿಗೂ ಕೊರೋನಾ ಸೋಂಕು ತಗುಲಿ ಅನೇಕ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.