Tuesday, August 16, 2022

Latest Posts

ಕುವೈಟ್ ಯಿಂದ ನವಮಂಗಳೂರು ಬಂದರಿಗೆ ಆಗಮಿಸಿದ ಮೆಡಿಕಲ್ ಆಕ್ಸಿಜನ್, ಟ್ಯಾಂಕ್ಸ್, ಆಕ್ಸಿಜನ್ ಕಾನ್ಸೆನ್ಟ್ರೇಟರ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ವರದಿ,ಮಂಗಳೂರು:

ಭಾರತದೊಂದಿಗಿನ ಸಧೃಡ ಅಂತಾರಾಷ್ಟ್ರೀಯ ಬಾಂಧವ್ಯದ ದ್ಯೋತಕವಾಗಿ ಕುವೈಟ್ ಸರಕಾರ ಭಾರತಕ್ಕೆ ಮೆಡಿಕಲ್ ಆಕ್ಸಿಜನ್, ಟ್ಯಾಂಕ್ಸ್, ಆಕ್ಸಿಜನ್ ಕಾನ್ಸೆನ್ಟ್ರೇಟರ್ ಪೂರೈಕೆಗೆ ನಿರ್ಧರಿಸಿದ್ದು, ಒಂದು ಹಡಗು ಸೋಮವಾರ ನವಮಂಗಳೂರು ಬಂದರಿಗೆ ಆಗಮಿಸಿತು.
ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹಾಗೂ ಪ್ರಮುಖರು ಹಡಗನ್ನು ಬರಮಾಡಿಕೊಂಡರು.
ಮಂಗಳವಾರ ಇನ್ನೆರಡು ಹಡಗುಗಳ ಮೂಲಕ ನಾಲ್ಕು ಕಂಟೈನರ್ ಗಳಲ್ಲಿ ವೈದ್ಯಕೀಯ ಆಮ್ಲಜನಕದ ಪೂರೈಕೆಗೆ ಕುವೈಟ್ ಮುಂದಾಗಿದೆ.
ಕುವೈಟ್ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಮತ್ತು ಉಮಾನಾಥ ಕೋಟ್ಯಾನ್ ಧನ್ಯವಾದ ಅರ್ಪಿಸಿದ್ದಾರೆ.
ಈ ಹಿಂದೆ ಭಾರತ ಕುವೈಟಿಗೆ ಎರಡು ಲಕ್ಷ ಡೋಸ್ ಲಸಿಕೆಯನ್ನು ಕಳುಹಿಸಿಕೊಟ್ಟಿರುವುದನ್ನು ಇಲ್ಲಿ ಸ್ಮರಿಸಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss