August 28, 2026
Friday, August 28, 2026
spot_img

ಲಕ್ನೋದಲ್ಲಿ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್‌ , ಐಸಿಸ್‌ ಜತೆ ಕಾಂಟಾಕ್ಟ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐಸಿಸ್‌ ಜತೆ ನಂಟು ಹೊಂದಿರುವ ಆರೋಪದ ಮೇಲೆ ಲಕ್ನೋದ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.

ಐಸಿಸ್ ಆನ್‌ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಹರಿಷ್‌ ಅಲಿ ಬಂಧಿತ. ಸಹರಾನ್‌ಪುರ ನಿವಾಸಿಯಾಗಿರುವ ಹರಿಷ್‌ನನ್ನು ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಈತನನ್ನು ಬಂಧಿಸಿದೆ.

ಭಾರತದಲ್ಲಿ ಐಸಿಸ್‌ ಸಂಬಂಧಿತ ಆನ್‌ಲೈನ್‌ ನೆಟ್‌ವರ್ಕ್‌ಗಳ ಚಟುವಟಿಕೆ ಕುರಿತು ತನಿಖೆ ನಡೆಸಲಾಗುತ್ತಿತ್ತು. ಈ ವೇಳೆ ಈತನನ್ನು ಅರೆಸ್ಟ್‌ ಮಾಡಲಾಗಿದೆ. ಇನ್ಸ್ಟಾಗ್ರಾಮ್‌ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಈತ ಐಸಿಸ್‌ ನಿರ್ವಾಹಕರ ಜತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !