March 12, 2026
Thursday, March 12, 2026
spot_img

ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ವೈದ್ಯಕೀಯ ವಿದ್ಯಾರ್ಥಿನಿಯ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾ ಸಮೀಪದ ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವೈದ್ಯಕೀಯ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಲಾವಣ್ಯ ಪ್ರತಾಪ್ ಎಂದು ಗುರುತಿಸಲಾಗಿದೆ.

ಹಾಸ್ಟೆಲ್‌ ಕೊಠಡಿಯ ಬಾಗಿಲು ಒಳಗಿನಿಂದ ಮುಚ್ಚಿಕೊಂಡಿದ್ದರಿಂದ ಸ್ನೇಹಿತರಿಗೆ ಅನುಮಾನ ಮೂಡಿ ಬಾಗಿಲು ತೆಗೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ವಶಪಡಿಸಿಕೊಂಡು ನಂತರ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ:

ಮೃತರು ಬಿಹಾರದ ಪಾಟ್ನಾ ಮೂಲದವರಾಗಿದ್ದು, ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಳೆದ ಕೆಲವು ಸೆಮಿಸ್ಟರ್‌ಗಳಲ್ಲಿ ಅನುತ್ತೀರ್ಣವಾಗಿದ್ದ ಕಾರಣ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಕುಟುಂಬಕ್ಕೆ ಸಮಯಕ್ಕೆ ಸರಿಯಾಗಿ ತಿಳಿಸಿಲ್ಲ ಎಂದು ಮೃತಳ ತಂದೆ ಅನಿಲ್ ಕುಮಾರ್ ಕಾಲೇಜು ಆಡಳಿತದ ವಿರುದ್ಧ ಆರೋಪಿಸಿದ್ದಾರೆ. ಈ ಸಾವು ಆತ್ಮಹತ್ಯೆಯೇ ಅಥವಾ ಬೇರೆ ಕಾರಣಗಳಿವೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !