ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ವೈದ್ಯಕೀಯ ವಿದ್ಯಾರ್ಥಿನಿಯ ಆತ್ಮಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತ್ತಾ ಸಮೀಪದ ದುರ್ಗಾಪುರದಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ವೈದ್ಯಕೀಯ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಲಾವಣ್ಯ ಪ್ರತಾಪ್ ಎಂದು ಗುರುತಿಸಲಾಗಿದೆ. ಹಾಸ್ಟೆಲ್‌ ಕೊಠಡಿಯ ಬಾಗಿಲು ಒಳಗಿನಿಂದ ಮುಚ್ಚಿಕೊಂಡಿದ್ದರಿಂದ ಸ್ನೇಹಿತರಿಗೆ ಅನುಮಾನ ಮೂಡಿ ಬಾಗಿಲು ತೆಗೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ವಶಪಡಿಸಿಕೊಂಡು ನಂತರ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಇದನ್ನೂ … Continue reading ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ವೈದ್ಯಕೀಯ ವಿದ್ಯಾರ್ಥಿನಿಯ ಆತ್ಮಹ*ತ್ಯೆ