ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದ ಎಂಬಿಬಿಎಸ್​ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ದೀಕ್ಷಿತ್​ ರೆಡ್ಡಿ (21) ಮೃತ ವಿದ್ಯಾರ್ಥಿ. ಈತ ಸಿಕಂದರಬಾದ್​​ನಲ್ಲಿರುವ ಗಾಂಧಿ ಮೆಡಿಕಲ್​ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್​ ಓದುತ್ತಿದ್ದ. ಭಾನುವಾರ ತನ್ನ ಮನೆಯಲ್ಲಿ ಪೋಷಕರಿಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಂಬಿಬಿಎಸ್​ ಓದುತ್ತಿದ್ದ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!