ಹೊಸದಿಗಂತ ಡಿಜಿಟಲ್ ಡೆಸ್ಕ್:
ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ಸಮೀಪದ ನಿರ್ಜನ ಪ್ರದೇಶದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳ ಗುರುತನ್ನು ಈಗಾಗಲೇ ಬಹಿರಂಗಪಡಿಸಿಲ್ಲ.
ಘಟನೆ ಶುಕ್ರವಾರ ಸಂಭವಿಸಿದ್ದು, ಓಡಿಶಾದ ಜಲೇಶ್ವರ ಮೂಲದ ಯುವತಿ ತನ್ನ ಸ್ನೇಹಿತನೊಂದಿಗೆ ಹೊರಗೆ ತೆರಳಿದ್ದಾಗ ಕೆಲವರು ಅವರನ್ನು ತಡೆದು, 1 ಕಿ.ಮೀ ದೂರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಯುವತಿಯ ಫೋನ್ ಕಸಿದು 5,000 ರೂ. ಕಿತ್ತುಕೊಂಡು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸಂತ್ರಸ್ತೆಯ ಕುಟುಂಬದ ಆರೋಪದ ಪ್ರಕಾರ, ಯುವತಿಯ ಸ್ನೇಹಿತ ಕೂಡ ಈ ಅಪರಾಧದಲ್ಲಿ ಭಾಗವಹಿಸಿದ್ದಾನೆ, ಆಕೆಯನ್ನು ದಾರಿ ತಪ್ಪಿಸಿ ನಿರ್ಜನ ಸ್ಥಳಕ್ಕೆ ಕರೆದೊಯ್ಯಲು ಸಹಾಯ ಮಾಡಿದ್ದಾನೆ.
ಯುವತಿ ಈಗ ದುರ್ಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಂಧಿತ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಮತ್ತು ಮುಂದಿನ ತನಿಖೆ ನಡೆಸಲಾಗುತ್ತಿದೆ.