ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಘೋಷ್ ರಾಜೀನಾಮೆ ನೀಡಿದ್ದಾರೆ.
ಈ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿನಿಯೊಬ್ಬರು ಕೊಲೆಯಾಗಿದ್ದರು. ಕೊಲೆಗೂ ಮುನ್ನ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಘಟನೆಯ ನಂತರ, ಪ್ರತಿಭಟನೆಗಳು ಭುಗಿಲೆದ್ದವು ಮತ್ತು ವೈದ್ಯಕೀಯ ಸಂಘಗಳು ನ್ಯಾಯಕ್ಕಾಗಿ ಒತ್ತಾಯಿಸಿದವು.
ನಂತರ ವಿಶ್ವವಿದ್ಯಾಲಯದ ಪ್ರಾಂಶುಪಾಲರು ರಾಜೀನಾಮೆ ನೀಡಿದ್ದಾರೆ. ಮೊದಲಿಗೆ ವೈದ್ಯಕೀಯ ಕಾಲೇಜಿನ ವೈದ್ಯರು ಪ್ರತಿಭಟನೆ ನಡೆಸಿದರು. ಇದಾದ ಬಳಿಕ ಇತರ ವೈದ್ಯರೂ ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಇದೀಗ ಏಮ್ಸ್ ವೈದ್ಯರೂ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.
ಈ ಸಂಬಂಧ ಪೊಲೀಸರು ತನಿಖೆ ಪೂರ್ಣಗೊಳಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಅಂತಿಮ ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ವರದಿ ಬಂದ ನಂತರ ಆರೋಪಿಗಳ ವಿರುದ್ಧ ತನಿಖೆ ಆರಂಭವಾಗಲಿದೆ.