ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಗೋಮೂತ್ರದಲ್ಲಿನ ಔಷಧೀಯ ಗುಣಗಳನ್ನ ಕೊಂಡಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಐಐಟಿ ನಿರ್ದೇಶಕನ ಹೇಳಿಕೆಗೆ ತಮಿಳುನಾಡು ಕಾಂಗ್ರೆಸ್ ಸಂಸದ ಪಿ. ಕಾರ್ತಿ ಚಿದಂಬರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಐಐಟಿ ಮದ್ರಾಸ್ ನಿರ್ದೇಶಕರು ನಕಲಿ ವಿಜ್ಞಾನವನ್ನು ಹರಡುತ್ತಿರುವುದು ಅಸಂಬದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ.