ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೇಸ್‌ನಲ್ಲಿ ಜಾಮೀನು ಪಡೆದು ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ವಿಚಾರಣೆ ಟೆನ್ಷನ್ ಶುರುವಾಗಿದೆ.
ಏಪ್ರಿಲ್ 22ಕ್ಕೆ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ಇತ್ತ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯೋ ಟೆನ್ಷನ್ ಮಧ್ಯೆಯೇ ದರ್ಶನ್ ತಾಯಿ ಮೀನಾ ತೂಗುದೀಪ ಅವರು ಇಂದು ಶ್ರೀನಂಜುಂಡೇಶ್ವರನ ದರುಶನ ಪಡೆದಿದ್ದಾರೆ.
ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯ ದಕ್ಷಿಣ ಕಾಶಿ ಎಂದೇ ಕರೆಯಲಾಗುತ್ತದೆ. ಮೀನಾ ತೂಗುದೀಪ ಅವರು ಇಂದು ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಳಿಕ ಮಾತನಾಡಿದ ಮೀನಾ ತೂಗುದೀಪ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ನಂಜುಂಡೇಶ್ವರನ ಬಳಿ ಬೇಡಿಕೊಂಡಿದ್ದೇನೆ. ನನ್ನ ಮಗ ಡೆವಿಲ್ ಸಿನಿಮಾ ಶೂಟಿಂಗ್‌ನಲ್ಲಿದ್ದಾನೆ. ದೇವರ ಆಶೀರ್ವಾದ ಅವನ ಮೇಲಿದೆ ಎಂದಿದ್ದಾರೆ.