ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಅರಣ್ಯ ಪಡೆಗಳ ಮುಖ್ಯಸ್ಥರಾಗಿ ಮೊದಲ ಬಾರಿಗೆ ಮಹಿಳಾ ಅಧಿಕಾರಿ ಚುಕ್ಕಾಣಿ ಹಿಡಿದಿದ್ದು, ಮೀನಾಕ್ಷಿ ನೇಗಿ ನೇಮಕಗೊಂಡಿದ್ದಾರೆ.
ಹಿರಿಯ ಐಎಫ್‌ಎಸ್(IFS) ಅಧಿಕಾರಿಯಾಗಿದ್ದ ಮೀನಾಕ್ಷಿ ನೇಗಿ ಉತ್ತರಾಖಂಡ ರಾಜ್ಯದವರು. ಐಎಫ್‌ಎಸ್ ಅಧಿಕಾರಿಯಾಗಿ ಕರ್ನಾಟಕಕ್ಕೆ ನಿಯೋಜನೆಯಾಗಿದ್ದ ಅವರು 1989ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿ ಮೂರೂವರೆ ದಶಕದಿಂದ ಸೇವೆ ಸಲ್ಲಿಸಿದ್ದರು.
ಬಳ್ಳಾರಿ, ಮಂಡ್ಯ, ಚಿಕ್ಕಮಗಳೂರಿನಲ್ಲಿಯೂ ಡಿಸಿಎಫ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಮೀನಾಕ್ಷಿ ನೇಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿ ಆಗಿದ್ದರು.
ಕರ್ನಾಟಕ ಅರಣ್ಯ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಕುರಿತು ಉನ್ನತ ಮಟ್ಟದ ಸಮಿತಿ ಸಭೆ ಸೇರಿ ತೀರ್ಮಾನಿಸಲಾಗಿತ್ತು. ಬಳಿಕ ಕೇಂದ್ರ ಸರ್ಕಾರಕ್ಕೂ ವರದಿ ಸಲ್ಲಿಸಲಾಗಿದೆ. ಆದಾದ ಬಳಿಕ ಮೀನಾಕ್ಷಿ ವೇಗಿ ಅವರನ್ನು ಕೇಂದ್ರ ಸರ್ಕಾರದ ಸೇವೆಯಿಂದ ಬಿಡುಗಡೆ ಮಾಡಲಾಗಿತ್ತು.