ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಭೇಟಿಯಾಗುವುದನ್ನು ಪಾಪವಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ, ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷದೊಂದಿಗಿನ ಅದಾನಿ ಸಂಬಂಧದ ಬಗ್ಗೆ ತಮ್ಮ ಪ್ರತಿಭಟನೆಯ ಮೂಲಕ ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಅವರು ನಮ್ಮ ದೇಶದ ಉದ್ಯಮಿ, ಪ್ರತಿ ರಾಜ್ಯ ಸರ್ಕಾರಗಳು ತಮ್ಮ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ದೊಡ್ಡ ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಲು ರೆಡ್ ಕಾರ್ಪೆಟ್ ಉರುಳಿಸಲು ಬಯಸುತ್ತವೆ. ಕಾಂಗ್ರೆಸ್ ಮತ್ತು ಡಿಎಂಕೆ ಸಂಸದರು ಸಂಸತ್ತಿನ ಹೊರಗೆ ‘ಅದಾನಿ-ಬಿಜೆಪಿ’ ಎಂದು ಬೋಗಸ್ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಣ್ಣಾಮಲೈ ಕಿಡಿಕಾರಿದ್ದಾರೆ.