ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸ ಕಾವೇರಿಯಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆದಿದೆ.
ಮುಂದಿನ ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಸಾಕಷ್ಟು ಚರ್ಚೆ ಆರಂಭವಾಗಿತ್ತು. ಈ ಮಧ್ಯೆ ಸಿಎಂ ಮೀಟಿಂಗ್ ಕರೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಸೇರಿ 14 ಸಚಿವರು ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ.
ಸಿಎಂ ಕಾವೇರಿ ನಿವಾಸದಲ್ಲಿ ಹೊಸತಾಗಿ ನಿರ್ಮಿಸಿರುವ ಮೀಟಿಂಗ್ ಹಾಲ್ ಉದ್ಘಾಟನೆ ಮಾಡಿದ್ದು, ಉಪಹಾರ ಕೂಟ ನಡೆಸಿದ್ದಾರೆ. ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ, ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ.