ಹೊಸದಿಗಂತ ಹಾಸನ:
ಲೋಕಸಭೆ ಚುನಾವಣೆ ಹಿನ್ನೆಲೆ ಮಾ.31 ರಂದು ಭಾನುವಾರ ಅಂದರೆ ಇಂದು ಮಧ್ಯಾಹ್ನ 1 ಗಂಟೆಗೆ ತಾಲೂಕಿನ ಸಾಲಗಾಮೆ ಹೋಬಳಿ ಕೇಂದ್ರದಲ್ಲಿ ಆ ಭಾಗದ ಎಂಟು ಗ್ರಾಮ ಪಂಚಾಯ್ತಿ ಜನ ಪ್ರತಿನಿಧಿಗಳು ಹಾಗೂ ಮುಖಂಡರ ಸಭೆ ಆಯೋಜಿಸಲಾಗಿದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭಾಗವಹಿಸಲಿದ್ದಾರೆ.
ಸಾಲಗಾಮೆ ಹೋಬಳಿ ವ್ಯಾಪ್ತಿಯ ಎಂಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಅಧ್ಯಕ್ಷರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.
ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕ್ಷೇತ್ರವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಮುಖಂಡರು, ಕಾರ್ಯಕರ್ತರು, ಬಿಜೆಪಿ ಹಿರಿಯ ಹಾಗೂ ಪ್ರಭಾವಿ ಮುಖಂಡರನ್ನು ಸೇರಿದಂತೆ ಕಾರ್ಯಕರ್ತರನ್ನು ಭೇಟಿ ಮಾಡುತ್ತಿದ್ದಾರೆ. ಈಗಾಗಲೇ ಜಿಲ್ಲೆಯ ವಿಧಾನಸಭ ಕ್ಷೇತ್ರಗಳಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡರು ಸಮಾವೇಷದ, ಸಭೆಗಳಲ್ಲಿ ಪಾಲ್ಗೊಂಡು ಪ್ರಜ್ವಲ್ ರೇವಣ್ಣ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.