Saturday, June 25, 2022

Latest Posts

ಬಿಜೆಪಿ ನಾಯಕರನ್ನು ಭೇಟಿಯಾದ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಆಗಿರುವ ದ್ರೌಪದಿ ಮುರ್ಮು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಪರಾಷ್ಟ್ರಪತಿ ಮತ್ತು ಪ್ರಧಾನಿ ಹಾಗೂ ವಿವಿಧ ಕೇಂದ್ರ ಸಚಿವರನ್ನು ಭೇಟಿ ಮಾಡಿದರು.
ಜುಲೈ 18ರಂದು ನಡೆಯುಲಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್​ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಿದ ಮೇಲೆ ಮೊದಲ ಬಾರಿಗೆ ಇಂದು ದ್ರೌಪದಿ ಮುರ್ಮು ದೆಹಲಿ ಪ್ರವಾಸ ಕೈಗೊಂಡರು. ಒಡಿಶಾದ ಭುವನೇಶ್ವರದಿಂದ ದೆಹಲಿಗೆ ಆಗಮಿಸಿರುವ ಅವರು, ಜೂ.24 ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಶಾ ಭೇಟಿಯಾದ ದ್ರೌಪದಿ ಮುರ್ಮುಇಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರನ್ನು ಭೇಟಿ ಮಾಡಿದರು. ಈ ವೇಳೆ ಎಲ್ಲ ನಾಯಕರು ದ್ರೌಪದಿ ಮುರ್ಮು ಅವರಿಗೆ ಶುಭ ಕೋರಿದರು.
ದ್ರೌಪದಿ ಮುರ್ಮು ಭೇಟಿ ಬಗ್ಗೆ ಪ್ರಧಾನಿ ಮೋದಿ ಟ್ವೀಟ್​​ ಮಾಡಿದ್ದು, ‘ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ನಾಮನಿರ್ದೇಶನ ಮಾಡಿರುವುದಕ್ಕೆ ದೇಶಾದ್ಯಂತ ಸಮಾಜದ ಎಲ್ಲ ವರ್ಗಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ತಳಮಟ್ಟದ ಸಮಸ್ಯೆಗಳ ಬಗ್ಗೆ ಅವರ ತಿಳುವಳಿಕೆ ಹಾಗೂ ದೃಷ್ಟಿಕೋನವು ಭಾರತದ ಅಭಿವೃದ್ಧಿಯಲ್ಲಿ ಮಹೋನ್ನತ ಪಾತ್ರ ವಹಿಸಲಿದೆ’ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss