ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ ಭೂಷಣ್ ಬಂಧನಕ್ಕೆ ಆಗ್ರಹಿಸಿ ನಡೆಸುತ್ತಿದ್ದ ಕುಸ್ತಿಪಟುಗಳ ಜೊತೆಗೆ ಸತತ 6 ಗಂಟೆಗಳ ಕಾಲ ಸಭೆ ನಡೆಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಕೆಲ ಮಹತ್ವದ ಘೋಷಣೆ ಮಾಡಿದ್ದಾರೆ.
ಜೂನ್ 15ರೊಳಗೆ ಬ್ರಿಜ್ ಭೂಷಣ್ ವಿರುದ್ಧದ ತನಿಖೆ ಪೂರ್ಣಗೊಳ್ಳಲಿದೆ ಎಂದ ಅನುರಾಗ್ ಠಾಕೂರ್ ಹೇಳಿದ್ದು, ಹೀಗಾಗಿಕೇಂದ್ರ ಸಚಿವರ ಭರವಸೆ ಮೇರೆಗೆ ಕುಸ್ತಿಪಟುಗಳು ಜೂನ್ 15ರ ವರೆಗೆ ಪ್ರತಿಭಟನೆ ರದ್ದು ಮಾಡಲು ನಿರ್ಧರಿಸಿದ್ದಾರೆ.
ಅನುರಾಗ್ ಠಾಕೂರ್ ಅಹ್ವಾನದ ಮೇರೆಗೆ ಮಾತುಕತೆಗಾಗಿ ತೆರಳಿದ ಕುಸ್ತಿಪಟುಗಳು ಹಲವು ಬೇಡಿಕೆ ಮುಂದಿಟ್ಟಿದ್ದಾರೆ. ಪ್ರಮುಖವಾಗಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬಂಧಿಸುವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂಬ ಅಚಲ ನಿರ್ಧಾರವನ್ನು ಕುಸ್ತಿಪಟಗಳು ವ್ಯಕ್ತಪಡಿಸಿದ್ದಾರೆ.
ಈ ವೇಳೆ ಕೇಂದ್ರ ಸಚಿವ ಅನುರಾಗ್ ಠಾಕೂರ್ , ಜೂನ್ 15ರೊಳಗೆ ಬ್ರಿಜ್ ಭೂಷಣ್ ವಿರುದ್ಧ ನಡೆಯುತ್ತಿರುವ ತನಿಖೆ ಪೂರ್ಣಗೊಳ್ಳಲಿದೆ. ಜೂನ್ 15ಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗಲಿದೆ. ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.