ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ: ಈ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುವ ಹಿನ್ನೆಲೆ ಬೆಂಗಳೂರು ನಗರದ ಕೆಲ ಸ್ಥಳಗಳಲ್ಲಿ ತಾತ್ಕಾಲಿಕವಾಗಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ತಾತ್ಕಾಲಿಕ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ದಿನಾಂಕ 01-04-2022ರಂದು ಕೇಂದ್ರ ಗೃಹಸಚಿವರು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಈ ಪ್ರಯುಕ್ತ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇಶ್ವರಂ 15 ಮತ್ತು 18ನೇ ಅಡ್ಡರಸ್ತೆ, ಮಾರ್ಗೋಸಾ ರಸ್ತೆ, ಟೆಂಪಲ್ ಸ್ಟ್ರೀಟ್ ರಸ್ತೆ ಮತ್ತು ಮಲ್ಲೇಶ್ವರಂ 4ನೇ ಮುಖ್ಯ ರಸ್ತೆಗಳಲ್ಲಿ ತಾತ್ಕಾಲಿಕವಾಗಿ ವಾಹನ ನಿಲುಗಡೆ ನಿಷೇಧಿಸಿರೋದಾಗಿ ತಿಳಿಸಿದ್ದಾರೆ.
ಈ ಆದೇಶವು ಬೆಳಿಗ್ಗೆ 6 ಗಂಟೆಯಿಂದ ಕೇಂದ್ರ ಗೃಹ ಸಚಿವರು ಬಂದು ಹೋಗುವವರೆಗೆ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ವಾಹನ ಸವಾರರು ಈ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡದಂತೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!