ಹೊಸದಿಗಂತ ಡಿಜಿಟಲ್ ಡೆಸ್ಕ್ :
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ರೋಡ್ ಶೋ ನಡೆಸಿದ್ದಾರೆ. ಬಿಜೆಪಿ ಪ್ರಮುಖ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ (National Executive Meeting) ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ರೋಡ್ ಶೋ ನಡೆಸಲಾಯಿತು.
ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ರೋಡ್‌ಶೋಗೆ ಮುನ್ನ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ರೋಡ್ ಶೋ ಮೂಲಕ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೀಪ ಬೆಳಗಿಸುವ ಮೂಲಕ ಸಭೆಗೆ ಚಾಲನೆ ನೀಡಿದ್ದಾರೆ.