ಮೆಗಾಸ್ಟಾರ್ ಚಿರಂಜೀವಿಯ ಮಾಜಿ ಅಳಿಯ ಶಿರೀಶ್ ಹಠಾತ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮೆಗಾಸ್ಟಾರ್ ಚಿರಂಜೀವಿಯ ಮಾಜಿ ಅಳಿಯ ಶಿರೀಶ್ ಭಾರಧ್ವಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಶಿರೀಶ್, ಮೆಗಾಸ್ಟಾರ್ ಚಿರಂಜೀವಿಯ ಪುತ್ರಿ ಶ್ರಿಜಾ ಕೊನೆಡೆಲಾ ಅವರನ್ನು ವಿವಾಹವಾಗಿದ್ದರು. ಬಳಿಕ ಶ್ರಿಜಾ, ಶೀರೀಶ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು, ಇಂದು ಬೆಳಿಗ್ಗೆ ಶಿರೀಶ್ ನಿಧನ ಹೊಂದಿದ್ದಾರೆ.

ಶಿರೀಶ್ ಕಳೆದ ಕೆಲವು ತಿಂಗಳಿನಿಂದಲ ಶ್ವಾಸಕೋಶಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಶಿರೀಶ್ ಹಾಗೂ ಶ್ರೀಜಾ ಕುಟುಂಬದವರನ್ನು ಎದುರು ಹಾಕಿಕೊಂಡು ವಿವಾಹವಾಗಿದ್ದು ಭಾರಿ ವಿವಾದ ಎಬ್ಬಿಸಿತ್ತು. ಆ ಸಮಯದಲ್ಲಿ ಪವನ್ ಕಲ್ಯಾಣ್ ಸೇರಿದಂತೆ ಕೆಲವರಿಂದ ತಮಗೆ ಬೆದರಿಕೆ ಇರುವುದಾಗಿ ಶ್ರೀಜಾ ದೂರು ಸಹ ದಾಖಲಿಸಿದ್ದರು.

ಶ್ರೀಜಾ ಹಾಗೂ ಶಿರೀಶ್ ಮದುವೆಯಾದ ಕೆಲ ವರ್ಷಗಳಲ್ಲಿ ಅವರಿಗೆ ಮಗಳೊಬ್ಬಳು ಜನಿಸಿದಳು. ಅದಾದ ಬಳಿಕ ಶ್ರೀಜಾ ಶಿರೀಶ್​ರಿಂದ ವಿಚ್ಛೇದನ ಪಡೆದು ಮರು ಮದುವೆ ಆದರು. ಆ ಬಳಿಕ ಶಿರೀಶ್ ಸಹ ಮತ್ತೊಂದು ಮದುವೆಯಾದರು. ವೃತ್ತಿಯಲ್ಲಿ ವಕೀಲರಾಗಿದ್ದ ಶಿರೀಶ್, ಬಿಜೆಪಿ ಪಕ್ಷ ಸೇರ್ಪಡೆಗೊಂಡು ರಾಜಕೀಯ ಪಯಣವನ್ನೂ ಸಹ ಆರಂಭಿಸಿದ್ದರು. ಆದರೆ ರಾಜಕೀಯದಲ್ಲಿ ಹೆಚ್ಚಿಗೇನು ಸಾಧಿಸಲಾಗಲಿಲ್ಲ.

ಶ್ರೀಜಾ ಹಾಗೂ ಶಿರೀಶ್ ಅವರ ಪುತ್ರಿಯನ್ನು ಮೆಗಾಸ್ಟಾರ್ ಚಿರಂಜೀವಿಯೇ ಸಾಕುತ್ತಿದ್ದು, ಶಿರೀಶ್ ಸಹ ಚಿರಂಜೀವಿ ಕುಟುಂಬದೊಟ್ಟಿಗೆ ಉತ್ತಮ ನಂಟನ್ನೇ ಹೊಂದಿದ್ದರು. ಆದರೆ ಇದೀಗ ಹಠಾತ್ತನೆ ಶಿರೀಶ್ ನಿಧನ ಹೊಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!