ಮೆಗಾಸ್ಟಾರ್ ಫ್ಯಾಮಿಲಿಯ ಮದುವೆ ಸಂಭ್ರಮ: ನಟಿ ಲಾವಣ್ಯ ಜೊತೆ ಹಸೆಮಣೆ ಏರಲು ರೆಡಿಯಾದ ವರುಣ್‌ ತೇಜ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚಿನ ದಿನಗಲ್ಲಿ ಸಿನಿಮಾ ರಂಗದಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ಈಗಾಗಲೇ ಅನೇಕ ಸ್ಟಾರ್ ನಟ-ನಟಿಯರು ಹಸೆಮಣೆ ಏರುತ್ತಿದ್ದಾರೆ. ಇದೀಗ ಈ ಸಲಿಗೆ ಮತ್ತೊಂದು ಜೋಡಿ ಸೇರಲು ಸಜ್ಜಾಗುತ್ತಿದೆ.

ತೆಲುಗು ನಟ ವರುಣ್ ತೇಜ್ (Varun Tej) ಸದ್ಯದಲ್ಲೇ ಸ್ಟಾರ್ ನಟಿಯ ಕೈ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ.
ಮೆಗಾಸ್ಟಾರ್ ಫ್ಯಾಮಿಲಿಯ ನಟ ವರುಣ್ ತೇಜ್‌ `ಮುಕುಂದ’ (Mukunda) ಚಿತ್ರದ ಮೂಲಕ ನಾಯಕ ನಟನಾಗಿ ಟಾಲಿವುಡ್‌ಗೆ ಎಂಟ್ರಿ ಕೊಟ್ಟು ಸಾಕಷ್ಟು ಸಿನಿಮಾಗಳ ಮೂಲಕ ಛಾಪು ಮೂಡಿಸಿದ್ದಾರೆ.
ಇದೀಗ ನಟಿ ಲಾವಣ್ಯ ಜೊತೆ ಹಸೆಮಣೆ ಏರಲು ವರುಣ್‌ ತೇಜ್‌ ರೆಡಿಯಾಗಿದ್ದಾರೆ.

ಇನ್ನೂ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ (Lavanya Tripati) ಹಲವು ವರ್ಷಗಳಿಂದ ಡೇಟಿಂಗ್ ಮಾಡ್ತಿದ್ದಾರೆ ಎನ್ನಲಾಗುತ್ತಿದೆ. ಈ ವರ್ಷ ಈ ಜೋಡಿ ಮದುವೆಯ ಕುರಿತು ಗುಡ್ ನ್ಯೂಸ್ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಕಾದುನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!