Friday, December 8, 2023

Latest Posts

ಮೆಗ್ಗಾನ್ ಆಸ್ಪತ್ರೆ ವೈದ್ಯರಿಂದ ಗರ್ಭಿಣಿಯ ಶಸ್ತ್ರಚಿಕಿತ್ಸೆ ಯಶಸ್ವಿ

ಹೊಸದಿಗಂತ ವರದಿ, ಶಿವಮೊಗ್ಗ :

ಅಪರೂಪದ ಬಾಂಬೆ ಬ್ಲಡ್ ಗ್ರೂಪ್ ಹೊಂದಿರುವ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಯ ಶಸ್ತ್ರಚಿಕಿತ್ಸೆ(ರಪ್ಚರಡ್ ಎಕ್ಟೋಪಿಕ್)ಯನ್ನು ಮೆಗ್ಗಾನ್ ಆಸ್ಪತ್ರೆ ವೈದ್ಯರು ನಡೆಸಿ ಮಹಿಳೆಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಹಳೆ ಜೋಗದ ವೀರದ್ರಪ್ಪನವರ ಪತ್ನಿ ಬೇಬಿ (31) ನ.12 ರಂದು ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸೆ ವಿಭಾಗಕ್ಕೆ ಹೊಟ್ಟೆ ನೋವಿಗಾಗಿ ದಾಖಲಾಗಿದ್ದರು. ಪರೀಕ್ಷೆ ನಡೆಸಿದಾಗ ಒಂದೂವರೆ ತಿಂಗಳ ಗರ್ಭಿಣಿಯಾಗಿರುವುದು ಕಂಡು ಬಂದಿತ್ತು. ಆದರೆ ಗರ್ಭಕೋಶದ ಬದಲು ಗರ್ಭರ್ನಾಳದಲ್ಲಿ ಗರ್ಭ ಧರಿಸಿರುವುದು ಅಂದರೆ ಎಕ್ಟೋಪಿಕ್ ಪ್ರೆಗ್ನೆನ್ಸಿ ಪತ್ತೆಯಾಗಿತ್ತು.
ಇವರು ಆಸ್ಪತ್ರೆಗೆ ಬಂದಾಗ ತೀವ್ರ ತರಹದ ಆಘಾತಕ್ಕೊಳಗಾಗಿದ್ದರು. ಅವರ ರಕ್ತ ತಪಾಸಣೆ ಮತ್ತು ಇತರೆ ಪರೀಕ್ಷೆಗಳನ್ನು ನಡೆಸಿದಾಗ ಹಿಮೋಗ್ಲೊಬಿನ್ ಪ್ರಮಾಣ 2.5 ಗ್ರಾಂ ಮತ್ತು ಬಿಪಿ 80/50 ಇತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಾ ಅರೆಪ್ರಜ್ಞಾವಸ್ಥೆಯಲ್ಲಿ ಇದ್ದರು. ಸ್ಕ್ಯಾನಿಂಗ್‌ನಲ್ಲಿ ಗರ್ಭನಾಳದಲ್ಲಿ ಇರಿಸಿರುವ ಗರ್ಭ ತುಂಡಾಗಿರುವುದು(ರಪ್ಚರಡ್ ಎಕ್ಟೋಪಿಕ್) ಕಂಡು ಬಂದಿತ್ತು.
ಅವರ ರಕ್ತ ಪರೀಕ್ಷಿಸಿದಾಗ ಪ್ರಪಂಚದಲ್ಲೇ ಅತಿ ವಿರಳವಾದ, ಅಪರೂಪದ ಬಾಂಬೆ ಬ್ಲಡ್ ಗ್ರೂಪ್ ಇರುವುದು ಪತ್ತೆಯಾಗಿತ್ತು. ತಕ್ಷಣ 4 ರಿಂದ 5 ಯುನಿಟ್ ರಕ್ತದ ಅವಶ್ಯಕತೆ ಕಂಡು ಬಂದಿತ್ತು.
ಆಸ್ಪತ್ರೆಯ ಡಾ.ಲೇಪಾಕ್ಷಿ ಬಿ.ಜಿ ಮತ್ತು ಡಾ.ಅಶ್ವಿನಿ ವೀರೇಶ್ ತಂಡದ ಸತತ ಪ್ರಯತ್ನ ಹಾಗೂ ವೈದ್ಯಕೀಯ ಈಕ್ಷಕ ಡಾ.ತಿಮ್ಮಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿದ್ದನಗೌಡ ಪಿ ಇವರ ಮಾರ್ಗದರ್ಶನದಲ್ಲಿ ವಿರಳ ರಕ್ತದ ಗುಂಪಿನ ದಾನಿಗಳನ್ನು ಸತತ 6 ಗಂಟೆಗಳ ಪ್ರಯತ್ನದಿಂದ ಹುಡುಕಿ, ಮಹಿಳೆಗೆ ನೀಡುವಲ್ಲಿ ರಕ್ತನಿಧಿ ಕೇಂದ್ರದ ವೈದ್ಯೆ ಡಾ.ವೀಣಾ ಮತ್ತು ತಂಡವರು ಶ್ರಲಾಯಿತು.
ಅರವಳಿಕೆ ತಜ್ಞ ವೈದ್ಯ ಡಾ.ಶಿವಾನಂದ ಪಿ.ಟಿ ಮತ್ತು ತಂಡದವರಿಂದ ಸಹಾಯ ಪಡೆದು ಯಶಸ್ವಿ 3 ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿದರು.
ವಿಜಯನಗರ ಜಿಲ್ಲೆಯ ಕೊಟ್ಟೂರು, ದಾವಣಗೆರೆ ಜಿಲ್ಲೆಯ ಮಾಯಕೊಂಡದಿಂದ ಇಬ್ಬರು ರಕ್ತದಾನಿಗಳು ಹಾಗೂ ಬೆಂಗಳೂರಿನ ಸಂಕಲ್ಪ ಫೌಂಡೇಷನ್, ಬೆಂಗಳೂರು ರಕ್ತನಿಧಿ ಕೇಂದ್ರದಿಂದ ಸಂಗ್ರಹಿಸಲಾಯಿತು.
ಅರವಳಿಕೆ ತಜ್ಞ ವೈದ್ಯ ಡಾ.ಶಿವಾನಂದ ಪಿ.ಟಿ ಮತ್ತು ತಂಡದವರಿಂದ ಸಹಾಯ ಪಡೆದು ಯಶಸ್ವಿ 3 ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿ, ಹೊಟ್ಟೆಯೊಳಗೆ ಸಂಗ್ರಹವಾಗಿದ್ದ ಸುಮಾರು 2.5 ಲೀ.ನಷ್ಟು ರಕ್ತವನ್ನು ಹೊರತೆಗೆದು ಗರ್ಭಿಣಿಯನ್ನು ಮೃತ್ಯುಕೂಪದಿಂದ ಹೊರತಂದರು.
ಅತಿ ವಿರಳ ಗುಂಪಿನ ರಕ್ತದಾನ ಮಾಡಿ ಜೀವ ಉಳಿಸಿದ ಮಾಯಕೊಂಡದ ಪ್ರವೀಣ್ ಜಿ, ಕೊಟ್ಟೂರಿನ ಸಿದ್ದೇಶ್, ಸಂಕಲ್ಪ ಫೌಂಡೇಶನ್, ಬೆಂಗಳೂರು ರಕ್ತನಿಧಿ ಕೇಂದ್ರ ಹಾಗೂ ಮೆಗ್ಗಾನ್ ರಕ್ತನಿಧಿ ಕೇಂದ್ರಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ವಿರೂಪಾಕ್ಷಪ್ಪ ‘ಧನ್ಯವಾದಗಳನ್ನು ಸಲ್ಲಿಸಿದ್ದಾರೆ.ಮಿಸಿದರು.
ವಿಜಯನಗರ ಜಿಲ್ಲೆಯ ಕೊಟ್ಟೂರು, ದಾವಣಗೆರೆ ಜಿಲ್ಲೆಯ ಮಾಯಕೊಂಡದಿಂದ ಇಬ್ಬರು ರಕ್ತದಾನಿಗಳು ಹಾಗೂ ಬೆಂಗಳೂರಿನ ಸಂಕಲ್ಪ ಫೌಂಡೇಷನ್, ಬೆಂಗಳೂರು ರಕ್ತನಿಧಿ ಕೇಂದ್ರದಿಂದ ಸಂಗ್ರಹಿಸಲಾಯಿತು.
ಅರವಳಿಕೆ ತಜ್ಞ ವೈದ್ಯ ಡಾ.ಶಿವಾನಂದ ಪಿ.ಟಿ ಮತ್ತು ತಂಡದವರಿಂದ ಸಹಾಯ ಪಡೆದು ಯಶಸ್ವಿ 3 ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿದರು.
ವಿಜಯನಗರ ಜಿಲ್ಲೆಯ ಕೊಟ್ಟೂರು, ದಾವಣಗೆರೆ ಜಿಲ್ಲೆಯ ಮಾಯಕೊಂಡದಿಂದ ಇಬ್ಬರು ರಕ್ತದಾನಿಗಳು ಹಾಗೂ ಬೆಂಗಳೂರಿನ ಸಂಕಲ್ಪ ಫೌಂಡೇಷನ್, ಬೆಂಗಳೂರು ರಕ್ತನಿಧಿ ಕೇಂದ್ರದಿಂದ ಸಂಗ್ರಹಿಸಲಾಯಿತು.
ಅರವಳಿಕೆ ತಜ್ಞ ವೈದ್ಯ ಡಾ.ಶಿವಾನಂದ ಪಿ.ಟಿ ಮತ್ತು ತಂಡದವರಿಂದ ಸಹಾಯ ಪಡೆದು ಯಶಸ್ವಿ 3 ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿ, ಹೊಟ್ಟೆಯೊಳಗೆ ಸಂಗ್ರಹವಾಗಿದ್ದ ಸುಮಾರು 2.5 ಲೀ.ನಷ್ಟು ರಕ್ತವನ್ನು ಹೊರತೆಗೆದು ಗರ್ಭಿಣಿಯನ್ನು ಮೃತ್ಯುಕೂಪದಿಂದ ಹೊರತಂದರು.
ಅತಿ ವಿರಳ ಗುಂಪಿನ ರಕ್ತದಾನ ಮಾಡಿ ಜೀವ ಉಳಿಸಿದ ಮಾಯಕೊಂಡದ ಪ್ರವೀಣ್ ಜಿ, ಕೊಟ್ಟೂರಿನ ಸಿದ್ದೇಶ್, ಸಂಕಲ್ಪ ಫೌಂಡೇಶನ್, ಬೆಂಗಳೂರು ರಕ್ತನಿಧಿ ಕೇಂದ್ರ ಹಾಗೂ ಮೆಗ್ಗಾನ್ ರಕ್ತನಿಧಿ ಕೇಂದ್ರಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ವಿರೂಪಾಕ್ಷಪ್ಪ ‘ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!