spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೈಸೂರು| ಆಗಸ್ಟ್ 14ರಂದು ಮೆಗಾ ಲೋಕ್ ಅದಾಲತ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ಜಿಲ್ಲೆಯಲ್ಲಿ ಆಗಸ್ಟ್ 14ರಂದು ಮೆಗಾ ಲೋಕ್ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್.ರಘುನಾಥ್ ತಿಳಿಸಿದರು.
ಶನಿವಾರ ನಗರದ ನ್ಯಾಯಾಂಗಣದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ನಗರ ಮತ್ತು ತಾಲ್ಲೂಕುಗಳಲ್ಲಿ ಒಟ್ಟು 1,08,661 ಪ್ರಕರಣಗಳಿದ್ದು, ಈ ಪೈಕಿ 81,585 ರಾಜಿಯಾಗಬಲ್ಲ ಹಾಗೂ 23,217 ಪ್ರಕರಣಗಳನ್ನು ಗುರುತಿಸಿ ಪೂರ್ವಭಾವಿ ಬೈಠಕ್‌ಗಳಿಗಾಗಿ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ- 3,899, ಭೂ ಸ್ವಾಧೀನ-702, ಹಣಕಾಸು- 3,599, ಆಸ್ತಿ ವಿಭಾಗ- 6,999, ತಡೆಯಾಜ್ಞೆ- 11,835, ನಿರ್ದಿಷ್ಟ ಕಾರ್ಯಕ್ಷಮತೆ- 1,983, ರಾಜಿಯಾಗಬಲ್ಲ ಅಪರಾಧಿ ಪ್ರಕರಣಗಳು- 3,320, ಚೆಕ್ಕು ಅಮಾನ್ಯದ ಪ್ರಕರಣಗಳು- 22,378, ಕೌಟುಂಬಿಕ ಮತ್ತು ಜೀವನಾಂಶ ಪ್ರಕರಣಗಳು- 1268, ಇತರೇ- 25,602, ವ್ಯಾಜ್ಯ ಪೂರ್ವ- 110 ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss