Thursday, August 11, 2022

Latest Posts

ಆ.14 ರಂದು ಮೆಗಾ ಲೋಕ್ ಅದಾಲತ್: ಸೆಷನ್ ನ್ಯಾಯಾಧೀಶ ಜಿನರಾಳಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಆಗಸ್ಟ್ 14 ರಂದು ಮೆಗಾ ಲೋಕ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿನರಾಳಕರ್ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾ ನ್ಯಾಯಾಲಯ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜಿ ಸಂಧಾನದ ಮೂಲಕ ಇತ್ಯರ್ಥವಾಗುವ ಪ್ರಕರಣಗಳನ್ನು ಪರಿಹರಿಸಲಾಗುವುದು. ಸಾರ್ವಜನಿಕ ಹಿತಾಸಕ್ತಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮೆಗಾ ಲೋಕ ಅದಾಲತ್ ಏರ್ಪಡಿಸಲಾಗಿದೆ. ಆ ದಿಸೆಯಲ್ಲಿ ಈ ಅವಕಾಶವನ್ನು ಜಿಲ್ಲೆಯ ಜನತೆ ಬಳಸಿಕೊಳ್ಳುವಂತಾಗಬೇಕು ಎಂದು ಕೋರಿದರು.
ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲು ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಮತ್ತು ನೀರಿನ ಶುಲ್ಕಗಳು, ಮೈಂಟೆನ್ಸ್ ಪ್ರಕರಣಗಳು ಹಾಗೆಯೇ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಲ್ಲ ಅಪರಾಧಿತ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ನ್ಯಾಯಾಧೀಕರಣ ಪ್ರಕರಣಗಳು, ವೇತನ ಹಾಗೂ ಭತ್ಯೆಗೆ ಸಂಬಂಧಿಸಿದ ಸೇವಾ ಪ್ರಕರಣಗಳು, ಬಾಡಿಗೆ, ಅನುಭೋಗ ಹಕ್ಕುಗಳು ಹೀಗೆ ಹಲವು ರೀತಿಯ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗುತ್ತದೆ ಎಂದು ನ್ಯಾಯಾಧೀಶರು ತಿಳಿಸಿದರು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿಯೇ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಸಮಿತಿಗೆ ಆನ್‌ಲೈನ್, ವಿಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್., ವಾಟ್ಸ್ಅಪ್, ಎಲೆಕ್ಟ್ರಾನಿಕ್ ಮೋಡ್, ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಜಿನರಾಳಕರ್ ಅವರು ಹೇಳಿದರು.
18,356 ಪ್ರಕರಣ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಹ್ಮಣ್ಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಜು.16 ರವರೆಗೆ 18,356 ಪ್ರಕರಣಗಳಿದ್ದು, ಇದರಲ್ಲಿ 5,456 ಸಿವಿಲ್ ಪ್ರಕರಣಗಳು, 12,900 ಕ್ರಿಮಿನಲ್ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದೆ ಎಂದು ಮಾಹಿತಿ ನೀಡಿದರು.
ಇದರಲ್ಲಿ ಕನಿಷ್ಟ 2 ಸಾವಿರದಷ್ಟು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 08272-222373 ಇ-ಮೇಲ್ [email protected]
ನ್ನು ಸಂಪರ್ಕಿಸಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss