ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೇಘಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಮಹ್ಬೂಬುಲ್ ಹಕ್ ಅವರನ್ನು ಅಸ್ಸಾಂ ಪೊಲೀಸರು ಗುವಾಹಟಿಯಲ್ಲಿರುವ ಬಂಧಿಸಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮೆಹಬೂಬುಲ್ ಹಕ್ ಅವರನ್ನು ಗುರಿಯಾಗಿಸಿ ಹಲವು ಬಾರಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ(STF) ಜಂಟಿ ತಂಡ ಅವರನ್ನುಬಂಧಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಸಿಬಿಎಸ್‌ಇ 12ನೇ ತರಗತಿಯ ಭೌತಶಾಸ್ತ್ರ ಪರೀಕ್ಷೆಯ ಸಮಯದಲ್ಲಿ ಅಕ್ರಮ ವಿಧಾನಗಳನ್ನು ಸುಗಮಗೊಳಿಸುವ ಸಲುವಾಗಿ ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.
ಅಸ್ಸಾಂನ ಶ್ರೀಭೂಮಿ ಜಿಲ್ಲೆಯ ಕೇಂದ್ರೀಯ ವಿದ್ಯಾಲಯದಲ್ಲಿ ಒಟ್ಟು 274 ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿದುಬಂದಿದೆ. ಇದರಲ್ಲಿ 45 ವಿದ್ಯಾರ್ಥಿಗಳು ಶಾಲೆಯಿಂದ ಮತ್ತು 214 ವಿದ್ಯಾರ್ಥಿಗಳು ERD ಗ್ರೂಪ್‌ನಿಂದ ಬಂದಿದ್ದಾರೆ. ಹಣಕ್ಕೆ ಬದಲಾಗಿ ERD ಗ್ರೂಪ್ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯದಲ್ಲಿ ಸಹಾಯ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.