March 15, 2026
Sunday, March 15, 2026
spot_img

ಮೇಘಾಲಯ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಮತ್ತೆ ಎರಡು ಶವ ಪತ್ತೆ, ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: :

ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಇಂದು ಮತ್ತೆ ಎರಡು ಶವಗಳು ಪತ್ತೆಯಾಗಿವೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ಮುಂದುವರಿದಿದ್ದರಿಂದ ಇಂದು ಮತ್ತೆ ಎರಡು ಶವಗಳು ಪತ್ತೆಯಾಗಿವೆ. ಹಲವಾರು ಜನ ಇನ್ನೂ ಕಾಣೆಯಾಗಿದ್ದಾರೆ ಮತ್ತು ಶೋಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ, ಗಣಿ ಮತ್ತು ಖನಿಜ(ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಖ್ಲೈಹ್ರಿಯತ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !