ನಾಳೆ ಮೇಘಾಲಯ- ನಾಗಾಲ್ಯಾಂಡ್ ಚುನಾವಣೆ: ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಸೋಮವಾರ (ಫೆ. 27) ಜರುಗಲಿದೆ.

ಕೇಂದ್ರ ಚುನಾವಣಾ ಆಯೋಗವು ಎರಡು ರಾಜ್ಯಗಳ ಮತದಾನಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ನಾಗಾಲ್ಯಾಂಡ್‌ ರಾಜ್ಯದಲ್ಲಿ 60 ವಿಧಾನಸಭಾ ಕ್ಷೇತ್ರಗಳು ಇವೆ. ಇಲ್ಲಿ ಪುರುಷರು ಹಾಗೂ ಮಹಿಳೆಯರು ಸೇರಿ ಸರಿ ಸುಮಾರು 13,09,651 ಮತದಾರರು ಇದ್ದಾರೆ. ಅದೇ ರೀತಿ ಮೇಘಾಲಯ ರಾಜ್ಯದಲ್ಲಿ 60 ವಿಧಾನಸಭಾ ಕ್ಷೇತ್ರಗಳಲ್ಲಿ 21,61,129 ಒಟ್ಟು ಮತದಾರರು ಇದ್ದಾರೆ. ಇಲ್ಲಿ 81,443 ಹೊಸ ಮತದಾರರಿದ್ದಾರೆ.

ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ 2023ಯ ಫಲಿತಾಂಶ ಮಾರ್ಚ್ 02 ರಂದು ಪ್ರಕಟಗೊಳ್ಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!