ಭಾರತ್ ಜೋಡೊ ಯಾತ್ರೆಯಲ್ಲಿ ಮೆಹಬೂಬಾ ಮುಫ್ತಿ: ರಾಹುಲ್ ಗಾಂಧಿ ನೀಡಿದ್ರು ವಿಶೇಷ ಆಹ್ವಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಭಾರತ್ ಜೋಡೊ ಯಾತ್ರೆ ಮುಂದಿನ ತಿಂಗಳು ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲಿದ್ದು, ಈ ವೇಳೆ ಭಾಗವಹಿಸುವಂತೆ ಮೆಹಬೂಬಾ ಮುಫ್ತಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

ಕಾಶ್ಮೀರದಲ್ಲಿ ನಡೆಯಲಿರುವಯಾತ್ರೆಗೆ ಸೇರಲು ರಾಹುಲ್ ಗಾಂಧಿಯವರು ನನ್ನನ್ನು ಔಪಚಾರಿಕವಾಗಿ ಆಹ್ವಾನಿಸಿದ್ದಾರೆ. ಅವರ ಅದಮ್ಯ ಧೈರ್ಯಕ್ಕೆ ವಂದನೆಗಳು, ಫ್ಯಾಸಿಸ್ಟ್ ಶಕ್ತಿಗಳಿಗೆ ಸವಾಲು ಹಾಕುವ ಧೈರ್ಯವಿರುವ ಯಾರೊಂದಿಗಾದರೂ ನಿಲ್ಲುವುದು ನನ್ನ ಕರ್ತವ್ಯ ಎಂದು ನಾನು ನಂಬುತ್ತೇನೆ. ಉತ್ತಮ ಭಾರತದೆಡೆಗಿನ ಅವರ ನಡಿಗೆಯಲ್ಲಿ ಅವರೊಂದಿಗೆ ಸೇರಿಕೊಳ್ಳುತ್ತೇನೆ ಎಂದು ಟ್ವೀಟ್ ಮೂಲಕ ತಮ್ಮ ಭಾಗವಹಿಸುವಿಕೆಯನ್ನು ತಿಳಿಸಿದ್ದಾರೆ.

ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ ಜನವರಿ 20 ರಂದು ಜಮ್ಮು ಮತ್ತು ಕಾಶ್ಮೀರವನ್ನು ತಲುಪಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!