ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗೆ ಅನುಮೋದನೆ ನೀಡಿ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.
“ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.