ಮೇಕೆದಾಟು ಯೋಜನೆ: ಭೂಸ್ವಾಧೀನ ಪ್ರಕ್ರಿಯೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೇಕೆದಾಟು ಜಲಾಶಯ ಯೋಜನೆಗೆ ಕುರಿತ ಸಮೀಕ್ಷೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದ್ದು, ಇದೀಗ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ಈ ಯೋಜನೆ ಜಾರಿಗೆ ಬದ್ಧವಾಗಿರುವ ರಾಜ್ಯ ಸರ್ಕಾರವು, ತಮಿಳುನಾಡಿಗೆ 177.25 ಟಿಎಂಸಿ ಅಡಿ ಪೂರೈಸುವ ಬದ್ಧತೆಯನ್ನು ಹೊರತುಪಡಿಸಿ ಹೆಚ್ಚುವರಿ ನೀರನ್ನು ಬಳಸಲು ಅವಕಾಶ ನೀಡುವಂತೆ ಕೇಂದ್ರ ಮತ್ತು ನ್ಯಾಯಾಲಯಗಳ ಮೇಲೆ ಒತ್ತಡ ಹೇರುತ್ತಿದೆ.

ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮೋದನೆ ನೀಡುವ ಆಶಯದೊಂದಿಗೆ ರಾಜ್ಯ ಸರ್ಕಾರ ಇದೀಗ ರಾಮನಗರದಲ್ಲಿ ಕಚೇರಿಯನ್ನು ತೆರೆದಿದೆ.

ಕರ್ನಾಟಕವು ಜೂನ್‌ನಲ್ಲಿ ತಮಿಳುನಾಡಿಗೆ 9 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಬೇಕಿತ್ತು. ಆದರೆ, ಈಗಾಗಲೇ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳೆರಡೂ ತುಂಬಿ ಹರಿಯುತ್ತಿರುವುದರಿಂದ ಈಗಲೇ 21 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!