Wednesday, August 10, 2022

Latest Posts

ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ರಾಜೀವ್ ಸತಾವ್ ಕೊರೋನಾ ಸೋಂಕಿಗೆ ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ರಾಜೀವ್ ಸತಾವ್ ಅವರು ಇಂದು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಸತಾವ್ ಅವರಿಗೆ ಏಪ್ರಿಲ್ 22ರಂದು ಕೊರೋನಾ ಸೋಂಕು ತಗುಲಿದ್ದು, ಪುಣೆಯ ಜೆಹಾಂಗೀರ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೇ.16 ರಂದು ( ಭಾನುವಾರ) ಮೃತಪಟ್ಟಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜೀವ್ ಸತಾವ್​ ಅವರು ಬಹಳ ಆಪ್ತರಾಗಿದ್ದರು.

ಪ್ರಸ್ತುತ ರಾಜೀವ್ ಅವರು ಸಂಸತ್ ಸದಸ್ಯರಾಗಿದ್ದರು. ಇದಕ್ಕೂ ಹಿಂದೆ ಮಹಾರಾಷ್ಟ್ರದ ಹಿಂಗೋಲಿಯಿಂದ 16ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದರು. ಹಾಗೆಯೇ ಗುಜರಾತ್ ರಾಜ್ಯದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಸ್ತುವಾರಿ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಶಾಶ್ವತವಾಗಿ ಆಯ್ಕೆಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss