ಸಂಸದೆ ಸುಮಲತಾ ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆದಿದೆ: ಸಿಎಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂಸದೆ ಸುಮಲತಾ ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದಷ್ಟೇ ತಿಳಿಸಿದರು.

ಇದೇ ವೇಳೆ ಆರ್​ಎಸ್‌ಎಸ್​ನವರಿಗೆ ಗೋಮಾಳ ಜಾಗ ನೀಡಲಾಗುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಉತ್ತರಿಸಿದ ಸಿಎಂ, ಈ ಹಿಂದೆ ಸಿದ್ದರಾಮಯ್ಯ ಅವರು ತಮಗೆ ಬೇಕಾದ ಸಂಸ್ಥೆಗಳಿಗೆ ಜಮೀನು ನೀಡಿದ್ದಾರೆ. ಗೋಮಾಳ ಜಾಗವನ್ನು ನಾವೇನು ಕೊಟ್ಟಿಲ್ಲ. ಕಂದಾಯ ನಿವೇಶನಗಳಲ್ಲಿ ಶಿಕ್ಷಣ, ಗೋಶಾಲೆಗಳಿಗೆ ಪ್ರೋತ್ಸಾಹ ನೀಡಲು ಕೊಡಲಾಗಿದೆ. ಅದರರ್ಥ ನಾವು ಎಲ್ಲಾ ಗೋಮಾಳ ಜಮೀನು ನೀಡಿದ್ದೇವೆ ಎಂದಲ್ಲ ಎಂದು ಸ್ಪಷ್ಟನೆ ನೀಡಿದರು.

ನಿರೀಕ್ಷಣಾ ಜಾಮೀನು‌ ಪಡೆದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೆರವಣಿಗೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಕುರಿತು ಇದು ಸರಿಯಲ್ಲ. ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಬಿಜೆಪಿಯ ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಎಂಬ ಬಿ‌ಎಸ್ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಸಂಸದೀಯ ಮಂಡಳಿ ಸದಸ್ಯರಿದ್ದಾರೆ. ಸಂಸದೀಯ ಮಂಡಳಿ ಸಭೆಯಲ್ಲಿ ಒಂದೊಂದು ಕ್ಷೇತ್ರದ ಕುರಿತು ಚರ್ಚೆ ಆಗುತ್ತದೆ. ಒಂದು‌ ಚುನಾವಣೆ ಇನ್ನೊಂದು ಚುನಾವಣೆಗಿಂತ ಭಿನ್ನವಾಗಿರುತ್ತದೆ. ಈ ಬಗ್ಗೆ ಸಮೀಕ್ಷೆ ಎಲ್ಲ ವಿಚಾರಗಳ ಬಗ್ಗೆ ಚಿಂತಿಸಿ ಕ್ರಮಕೈಗೊಳ್ಳಲಾಗುತ್ತದೆ. ಇದನ್ನೇ ಬಿಎಸ್​​ವೈ ಹೇಳಿದ್ದಾರೆ ಎಂದರು.

ಸಿಎಂ ಭ್ರಷ್ಟಾಚಾರದಲ್ಲಿ‌ ತೊಡಗಿದ್ದಾರೆ ಎಂಬ ಡಿಕೆಶಿ‌ ಹೇಳಿಕೆಗೆ ಪ್ರತಿಕ್ರಿಯಿಸಿ ಸಿಎಂ ಬೊಮ್ಮಾಯಿ, ಡಿಕೆಶಿಗೂ ಭ್ರಷ್ಟಾಚಾರಕ್ಕೂ ಬಿಡಲಾರದ ನಂಟು. ಮೊದಲು ಅವರು ತಮ್ಮ ಮೇಲಿರೋ ಆರೋಪಕ್ಕೆ ಉತ್ತರ ನೀಡಲಿ ಎಂದು‌ ಟೀಕಿಸಿದರು. ಸಿ ಟಿ‌ ರವಿ‌ ಉಗ್ರ ಎಂಬ ಕಾಂಗ್ರೆಸ್ ಮುಖಂಡರ‌ ಹೇಳಿಕೆಗೆ ಮಾತನಾಡಿ, ಕಾಂಗ್ರೆಸ್‌ನವರಿಗೆ ದೇಶ ಭಕ್ತರು ಉಗ್ರರ ಹಾಗೆ ಕಾಣುತ್ತಾರೆ. ನಮಗೆ ದೇಶದ್ರೋಹಿಗಳು ಉಗ್ರರ ಹಾಗೆ ಕಾಣುತ್ತಾರೆ ಎಂದು‌ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!