ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ ಪತ್ನಿ ನಿಧನ

ಹೊಸದಿಗಂತ ವರದಿ, ಮೈಸೂರು :

ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ ಅವರ ಪತ್ನಿ ಮೀರಾಬಾಯಿ (೭೦) ಸೋಮವಾರ ಮಧ್ಯಾಹ್ನ ನಿಧನರಾದರು. ಅನಾರೋಗ್ಯದ ಕಾರಣ ಮೀರಾಬಾಯಿ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ೨ ಗಂಟೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೀರಾಬಾಯಿ ಅವರು ತಮ್ಮ ಮಕ್ಕಳು ಹಾಗೂ ಪತಿಯನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಮಂಗಳವಾರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!