ಹೊಸದಿಗಂತ ವರದಿ ವಿಜಯಪುರ:
ಮೊಸಳೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ಲ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ. ಹಂಡರಗಲ್ಲ ಗ್ರಾಮದ ನಾಗಪ್ಪ ಸಂಜಿವಪ್ಪ ಉಂಡಿ (55) ಮೃತ ದುರ್ದೈವಿ. ಸ್ಥಳಕ್ಕೆ ಅರಣ್ಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ, ನದಿಯಿಂದ ಶವ ಹೊರತೆಗಿದ್ದಿದ್ದಾರೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.