ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಮತ್ತು ಅನಂತಪುರ ಜಿಲ್ಲೆಯ ನಾಗುನಿಕುಮಾರ್ ಮತ್ತು ಪರಶುರಾಮ್ ಬಂಧಿತ ಆರೋಪಿಗಳು.
ಇವರಿಂದ 22 ಲಕ್ಷ ಮೌಲ್ಯದ 176 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಪಟ್ಟಣದಲ್ಲಿ ಬಿಎಂಟಿಸಿ ಬಸ್ಸಿನಿಂದ ವ್ಯಕ್ತಿಯೊಬ್ಬನ ಮೊಬೈಲ್ ಕಳ್ಳತನವಾಗಿತ್ತು. ಈ ಪ್ರಕರಣದಲ್ಲಿ, ಒಬ್ಬ ವ್ಯಕ್ತಿಯನ್ನು ಏಪ್ರಿಲ್ 31 ರಂದು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.
ಬಳಿಕ ಮೇ 18ರಂದು ಬೆಂಗಳೂರಿನ ಗೋಪಾಲಪುರದಲ್ಲಿ ಮತ್ತೊಬ್ಬನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.