ಹೊಸದಿಗಂತ ಡಿಜಿಟಲ್ ಡೆಸ್ಕ್:
ಋತುಸ್ರಾವ ಮಹಿಳೆಯರ ಬದುಕಿನ ನೈಸರ್ಗಿಕ ಭಾಗ. ಅದು ಅಂಗವಿಕಲತೆ ಅಲ್ಲ. ಇದನ್ನು ವಿಶೇಷ ರಜೆ ನಿಬಂಧನೆಗಳ ಅಗತ್ಯವಿರುವ ಅಂಗವಿಕಲತೆ ಎಂದು ಪರಿಗಣಿಸಬಾರದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಋತುಸ್ರಾವ ನೈರ್ಮಲ್ಯದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದ ಅವರು, ದೇಶದಾದ್ಯಂತ ಸರಿಯಾದ ಋತುಸ್ರಾವ ನೈರ್ಮಲ್ಯ ನಿರ್ವಹಣೆ ಬಗ್ಗೆ ಜಾಗೃತಿ ನೀಡುವ ಗುರಿ ಇದೆ. ಇದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕರಡು ರಾಷ್ಟ್ರೀಯ ನೀತಿಯನ್ನು ರೂಪಿಸುವುದಾಗಿ ಘೋಷಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ