ಪತ್ನಿಯ ಸಾವಿನಿಂದ ಮಾನಸಿಕ ಖಿನ್ನತೆ: ಇಬ್ಬರು ಮಕ್ಕಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಹೊಸದಿಗಂತ ವರದಿ, ದಾವಣಗೆರೆ

ಪತ್ನಿಯ ಸಾವಿನಿಂದ ಮಾನಸಿಕ ಖಿನ್ನತೆ ಅನುಭವಿಸುತ್ತಿದ್ದ ವ್ಯಕ್ತಿಯೊಬ್ಬ ತನ್ನಿಬ್ಬರು ಮಕ್ಕಳನ್ನು ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ಗುರುವಾರ ನಡೆದಿದೆ.

ಇಲ್ಲಿನ ಎಸ್.ಪಿ.ಎಸ್ ನಗರದ ಉದಯ್(35 ವರ್ಷ) ತನ್ನಿಬ್ಬರು ಮಕ್ಕಳಾದ ಸಿಂಧುಶ್ರೀ(4), ಶ್ರೀಜಯ್(3) ಅವರುಗಳನ್ನು ಕೊಲೆಗೈದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರ ತಾಲೂಕು ಚಳಗೇರಿ ನಿವಾಸಿ ಹೇಮಾ ಹಾಗೂ ಉದಯ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಎಂಟು ತಿಂಗಳ ಹಿಂದೆ ಪತ್ನಿ ಹೇಮಾ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಇದರಿಂದಾಗಿ ಖಿನ್ನತೆಗೆ ಒಳಗಾಗಿದ್ದ ಪತಿ ಉದಯ್ ಮಕ್ಕಳನ್ನು ಕತ್ತು ಹಿಸುಕಿ ಕೊಂದು, ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾವಿಗೂ ಮುನ್ನ ರಕ್ತದಲ್ಲಿ ಐ ಲವ್ ಯು ಹೇಮಾ ಎಂಬುದಾಗಿ ಪತ್ನಿಯ ಹೆಸರನ್ನು ಗೋಡೆ ಮೇಲೆ ಬರೆದಿದ್ದಾನೆ. ಪ್ರೀತಿಸಿ ಕೈಹಿಡಿದಾಕೆ ಶಾಶ್ವತವಾಗಿ ಬಿಟ್ಟು ಹೋದ ನೋವು ತಡೆದುಕೊಳ್ಳಲಾಗದೆ ಉದಯ್ ಸಾವಿನ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!