October 10, 2026
Saturday, October 10, 2026
spot_img

ಬುದ್ಧಿಮಾಂದ್ಯ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಕಾಮುಕ ವೃದ್ಧರಿಂದ ಅತ್ಯಾ*ಚಾರ: ಪೋಕ್ಸೋ ಪ್ರಕರಣ ದಾಖಲು

ಹೊಸದಿಗಂತ ವರದಿ ವಿಜಯಪುರ:

ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ 16 ವರ್ಷದ ಅಪ್ರಾಪ್ತ ವಯಸ್ಕ ಬುದ್ದಿಮಾಂದ್ಯ ಬಾಲಕಿ ಮೇಲೆ ವೃದ್ಧರಿಬ್ಬರು ನಿರಂತರ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಲ್ಲಿನ 70 ವರ್ಷ ಹಾಗೂ 60 ವರ್ಷದ ವೃದ್ಧರಿಬ್ಬರು ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದು, ಇದರಲ್ಲಿ ಓರ್ವ ವೃದ್ಧ ಬಾಲಕಿಗೆ ಸಂಬಂಧಿಯಾಗಬೇಕಿದ್ದು, ಏನೂ ತಿಳಿಯದ ಅಮಾಯಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.

Must Read