ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಪ್ರಕರಣ ಸಂಬಂಧ 27 ಮಂದಿ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿಯ 2ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿ ಅತ್ಯಂತ ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಲಾಯಿತು.
ಕೊಲ್ಹಾಪುರದಲ್ಲಿ ಎಂಇಎಸ್ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಡುವ ಮೂಲಕ ಆರಂಭವಾದ ಗದ್ದಲ ಎರಡು ಕಡೆಯಿಂದ ಹೋರಾಟ ಆರಂಭವಾಗಿದೆ.
ನಿನ್ನೆ ಕನ್ನಡ ಪರ ಸಂಘಟನೆ ಮುಖಂಡರು ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದು ಅಪಮಾನ ಮಾಡಿದರು. ಇದಕ್ಕೆ ಪ್ರತೀಕಾರದ ರೂಪದಲ್ಲಿ ನಿನ್ನೆ ಎಂಇಎಸ್ ಕಾರ್ಯಕರ್ತರು 20ಕ್ಕೂ ಹೆಚ್ಚು ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಅಲ್ಲದೆ ಬೆಳಗಿನಜಾವ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದರು.
ಬೆಳಗಾವಿ ಪರಿಸ್ಥಿತಿ ಪ್ರಕ್ಷುಬ್ಧಗೊಳಿಸಿದ ಹಿನ್ನೆಲೆ 27 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.