Thursday, August 11, 2022

Latest Posts

ಕಲ್ಲಿದ್ದಲು ಗಣಿಯಲ್ಲಿ ಮಿಥೇನ್ ಗ್ಯಾಸ್ ಸ್ಫೋಟ: 6 ಕಾರ್ಮಿಕರು ಸಾವು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಆಫ್ಘನ್ ಗಡಿಯ ನೈರುತ್ಯ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಮಿಥೇನ್ ಗ್ಯಾಸ್ ಸ್ಫೋಟಗೊಂಡು ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಪ್ರಾಧಿಕಾರಗಳು ಮಾಹಿತಿ ನೀಡಿವೆ.
ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾದ ಪೂರ್ವಕ್ಕೆ 50 ಕಿಲೋ ಮೀಟರ್​ ದೂರದಲ್ಲಿರುವ ಮಾರವಾರ್ ಎಂಬಲ್ಲಿರುವ ಗಣಿಯಲ್ಲಿ ಸಂಗ್ರಹಿಸಿಟ್ಟಿದ್ದ ಮಿಥೇನ್ ಗ್ಯಾಸ್ ಸ್ಫೋಟದಿಂದ ಅವಘಡ ಸಂಭವಿಸಿದೆ ಎಂದು ಗಣಿ ಇನ್ಸ್​​ಪೆಕ್ಟರ್ ನಾಸೀರ್ ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಗಳು ಪೂರ್ಣಗೊಂಡಿವೆ. ಆದರೆ ಸ್ಫೋಟಕ್ಕೆ ಕಾರಣ ತಿಳಿಯುವ ಸಲುವಾಗಿ ತನಿಖಾಧಿಕಾರಿಗಳು ಇನ್ನೂ ಸ್ಥಳದಲ್ಲಿಯೇ ಇದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss