ನೀವು ಮೆಂತ್ಯ ಪ್ರಿಯರೇ…?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆರೋಗ್ಯಕರ ಆಹಾರ ಸೇವನೆ ಹಾಗೂ ನಿಯಮಿತವಾದ ದೈಹಿಕ ಚಟುವಟಿಕೆಗಳು, ವ್ಯಾಯಾಮಗಳು ನಮ್ಮ ದೇಹ ತೂಕವನ್ನು ಸಮತೋಲನದಲ್ಲಿಡಲು ಸಹಕಾರಿಯಾಗುತ್ತದೆ. ತೂಕ ಇಳಿಸಿಕೊಳ್ಳಲು ಇಷ್ಟ ಪಡುವ ವ್ಯಕ್ತಿಗಳು ಮೆಂತ್ಯವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ಇದರಲ್ಲಿ ಫೈಬರ್, ಕಬ್ಬಿಣದ ಅಂಶ, ವಿಟಮಿನ್ ಎ ಮತ್ತು ಡಿ ಪೋಷಕಾಂಶಗಳು ಹೇರಳವಾಗಿದೆ. ಮೆಂತ್ಯಬೀಜದಲ್ಲಿರುವ ನಾರಿನಾಂಶ ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ. ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಿಸುವುದಲ್ಲದೆ, ಚಯಾಪಚಯ ಕ್ರಿಯೆಯನ್ನು ಚುರುಕುಗೊಳಿಸುತ್ತದೆ. ಒಂದು ಚಮಚ ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಗ್ಗೆ ಖಾಲಿಹೊಟ್ಟೆಯಲ್ಲಿ ಸೇವಿಸಿದರೆ ತೂಕ ಇಳಿಕೆಗೆ ಸಹಕಾರಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!