Saturday, July 2, 2022

Latest Posts

ವಿಧಾನ ಪರಿಷತ್ ಚುನಾವಣೆ: ಕಣದಿಂದ ಹಿಂದೆ ಸರಿದ ಜೆಡಿಎಸ್

ಹೊಸದಿಗಂತ ವರದಿ,ಮಡಿಕೇರಿ:

ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಶುಕ್ರವಾರ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದು, ಇದರೊಂದಿಗೆ ಕೊಡಗು ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.
ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಿಂದ ಸುಜಾ ಕುಶಾಲಪ್ಪ, ಕಾಂಗ್ರೆಸ್ ನಿಂದ ಮಂಥರ್ ಗೌಡ ಹಾಗೂ ಜೆಡಿಎಸ್ ನಿಂದ ಇಸಾಕ್ ಖಾನ್ ನಾಮಪತ್ರ ಸಲ್ಲಿಸಿದ್ದರು.
ಆದರೆ ಇದೀಗ ಪಕ್ಷದ ವರಿಷ್ಠರ ಸೂಚನೆಯಂತೆ ಇಸಾಕ್ ಖಾನ್ ಕಣದಿಂದ ಹಿಂದೆ ಸರಿದಿದ್ದು, ಓ ಬೆಳವಣಿಗೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಕೊಡಗು ಜಿಲ್ಲೆಯಿಂದ ಅಭ್ಯರ್ಥಿ ಹಾಕದಂತೆ ತಾನೇ ಹೇಳಿದ್ದೆ ಎಂದು ಚಿಕ್ಕಬಳ್ಳಾಪುರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಕೊಡಗಿನಲ್ಲಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಬೆಳವಣಿಗೆ ನಡೆದಿರುವುದಾಗಿ ರಾಜಕೀಯ ವಲಯದಲ್ಲಿ ಗುಸುಗುಸು ಕೇಳಿ ಬರುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss