Wednesday, August 17, 2022

Latest Posts

ವಿಧಾನ ಪರಿಷತ್ ಚುನಾವಣೆ : ಕೊಡಗು ಬಿಜೆಪಿಯೊಂದಿಗೆ ರಾಜ್ಯ ನಾಯಕರ ಚರ್ಚೆ

ಹೊಸ ದಿಗಂತ ವರದಿ, ಮಡಿಕೇರಿ :

ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಕೊಡಗು ಜಿಲ್ಲಾ ಬಿಜೆಪಿ ಪ್ರಮುಖರೊಂದಿಗೆ ಚರ್ಚಿಸಿದರು.
ಮಡಿಕೇರಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಮಾಹಿತಿ ಸಂಗ್ರಹಿಸಿದರು.
ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚುರಂಜನ್, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮತ್ತಿತರರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸ್ಥಾನದ ಆಕಾಂಕ್ಷಿಗಳಾದ ರಾಬಿನ್ ದೇವಯ್ಯ, ಸುಜಾ ಕುಶಾಲಪ್ಪ, ಅರುಣ್ ಭೀಮಯ್ಯ, ಶಾಂತೆಯಂಡ ರವಿಕುಶಾಲಪ್ಪ, ನಾಪಂಡ ರವಿ ಕಾಳಪ್ಪ, ಬಿ.ಬಿ.ಭಾರತೀಶ್, ರಮೇಶ್ ಹೊಳ್ಳ, ಮನು ಮುತ್ತಪ್ಪ, ಡೀನ್ ಬೋಪಣ್ಣ, ಎಸ್.ಜಿ.ಮೇದಪ್ಪ, ಗಿರೀಶ್ ಗಣಪತಿ, ಸುನಿಲ್ ಸುಬ್ರಮಣಿ , ನಾಗೇಶ್ ಕುಂದಲ್ಪಾಡಿ ಚರ್ಚೆಯಲ್ಲಿ ಪಾಲ್ಗೊಂಡರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!