ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮೆಕ್ಸಿಕೋದಲ್ಲಿ ಮೆಟ್ರೋ ಮೇಲ್ಸೇತುವೆ ಕುಸಿದಿದ್ದು, ರೈಲು ಅಪಘಾತವಾಗಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೆಟ್ರೊ ರೈಲು ಸಂಚರಿಸುವ ವೇಳೆಯೇ ಸೇತುವೆ ಕುಸಿದಿದೆ. ಹೀಗಾಗಿ ಸೇತುವೆ ಕೆಳಗೆ ಸಂಚರಿಸುತ್ತಿದ್ದ ವಾಹನಗಳ ಮೇಲೆ ಮೆಟ್ರೊ ರೈಲು ಬಿದ್ದ ಪರಿಣಾಮ ರಕ್ಷಣಾ ಕಾರ್ಯಕ್ಕೆ ತೊಂದರೆಯಾಗಿದೆ. ನಂತರ, ಕ್ರೇನ್ ಬಳಸಿ ರಕ್ಷಣಾ ಕಾರ್ಯವನ್ನು ಚುರುಕುಗೊಳಿಸಲಾಯಿತು. ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಮೇಯರ್ ಕ್ಲಾಡಿಯಾ ಶೀನ್ಬಾಮ್ ತಿಳಿಸಿದ್ದಾರೆ.
ಮೃತಪಟ್ಟವರ ಪೈಕಿ ಮಕ್ಕಳ ಸಂಖ್ಯೆಯೇ ಹೆಚ್ಚು. 49 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ ಎಂದು ಕ್ಲಾಡಿಯಾ ತಿಳಿಸಿದ್ದಾರೆ.