April 2, 2026
Thursday, April 2, 2026
spot_img

ಮೆಟ್ರೋ ಪ್ರಯಾಣಿಕರೇ ಇತ್ತ ನೋಡಿ.. ಭಾನುವಾರ ಬೆಳಗ್ಗೆ ನಿಮ್ಮ ಪ್ರಯಾಣದ ಪ್ಲ್ಯಾನ್ ಬದಲಿಸಿಕೊಳ್ಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೆಟ್ರೋ ಪ್ರಯಾಣಿಕರೇ ಗಮನಿಸಿ, ಏಪ್ರಿಲ್ 5ರ ಭಾನುವಾರ ಬೆಳಿಗ್ಗೆ ನೇರಳೆ ಮಾರ್ಗದ ಸಂಚಾರದಲ್ಲಿ ತುಸು ವ್ಯತ್ಯಯವಾಗಲಿದೆ. ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣಗಳ ನಡುವೆ ಅತ್ಯಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ, ಅಂದು ಬೆಳಿಗ್ಗೆ 7ರಿಂದ 9 ಗಂಟೆಯವರೆಗೆ ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಆದರೆ, ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ ಹಾಗೂ ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್‌ವರೆಗಿನ ಸಂಚಾರ ಎಂದಿನಂತೆ ಇರಲಿದೆ. ಹಾಗೆಯೇ ಹಸಿರು ಮಾರ್ಗ ಹಾಗೂ ಹಳದಿ ಮಾರ್ಗಗಳ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಬೆಳಿಗ್ಗೆ 9 ಗಂಟೆಯ ನಂತರ ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಯಥಾಸ್ಥಿತಿಯಲ್ಲಿ ಸಂಚರಿಸಲಿವೆ. ಪ್ರಯಾಣಿಕರು ಈ ಸಮಯದ ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕೆಂದು ನಮ್ಮ ಮೆಟ್ರೋ ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !