ಮೆಟ್ರೋ ಪ್ರಯಾಣಿಕರೇ ಗಮನಿಸಿ: ನಾಳೆ ಸಂಚಾರದಲ್ಲಿ ವ್ಯತ್ಯಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಳೂರಿನ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊತ್ತಿಕೊಳ್ಳುತ್ತಿರುವ ಹಿನ್ನಲೆಯಲ್ಲಿ, ನಾಳೆ ಈ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ದಿನಾಂಕ 23-04-2022ರ ನಾಳೆ ರಾತ್ರಿ 9.30 ಗಂಟೆಯಿಂದ ಇಂದಿರಾನಗರ-ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ನಾಳೆ ರಾತ್ರಿ 9.30 ಗಂಟೆಯಿಂದ ತಾತ್ಕಾಲಿಕವಾಗಿ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ.
ದಿನಾಂಕ 24-04-2022ರವರಂದು ಬೆಳಿಗ್ಗೆ 7 ಗಂಟೆಯಿಂದ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚಾರ ಪುನರಾರಂಭಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!